मौसम क्रिकेट ऑपरेशन सिंदूर क्रिकेट स्पोर्ट्स बॉलीवुड जॉब - एजुकेशन बिजनेस लाइफस्टाइल देश विदेश राशिफल आध्यात्मिक अन्य
---Advertisement---

ಮಲೆನಾಡಿನಲ್ಲಿ ಕಾಡುಹಂದಿ ಅಟ್ಟಹಾಸ: ಮಹಿಳೆಯ ಮೇಲೆ ದಾಳಿ

---Advertisement---

 

 

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಆಲೂರು ಗ್ರಾಮದಲ್ಲಿ ಕಾಡುಹಂದಿ ದಾಳಿಯಿಂದ ರೈತ ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಆತಂಕಕಾರಿ ಘಟನೆ ನಡೆದಿದೆ. ಕಾಫಿನಾಡಿನ ಮಲೆನಾಡು ಭಾಗದಲ್ಲಿ ಈಗಾಗಲೇ ಕಾಡಾನೆ ಹಾಗೂ ಕಾಡೆಮ್ಮೆಗಳ ಹಾವಳಿ ಮಿತಿಮೀರಿದ್ದು, ಇದರ ಬೆನ್ನಲ್ಲೇ ಈಗ ಕಾಡುಹಂದಿಗಳ ಉಪಟಳವೂ ರೈತರ ನಿದ್ದೆಗೆಡಿಸಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ 41 ವರ್ಷದ ಲಕ್ಷ್ಮಿ ಎಂಬುವವರ ಮೇಲೆ ಹಂದಿ ಏಕಾಏಕಿ ಎರಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಮೂಡಿಗೆರೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಿರಂತರ ವನ್ಯಮೃಗಗಳ ದಾಳಿಯಿಂದಾಗಿ ತೋಟಗಳಿಗೆ ತೆರಳಲು ಕಾರ್ಮಿಕರು ಹಾಗೂ ರೈತರು ಭಯಭೀತರಾಗಿದ್ದು, ಅರಣ್ಯ ಇಲಾಖೆಯು ಕೂಡಲೇ ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಸ್ಥಳೀಯ ನಿವಾಸಿಗಳು ತೀವ್ರವಾಗಿ ಒತ್ತಾಯಿಸಿದ್ದಾರೆ.

Join WhatsApp

Join Now

Join Telegram

Join Now

Leave a Comment